ಯೋನ 1:6

ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.

ಸಂದರ್ಭದೊಂದಿಗೆ ಓದಿ · ಯೋನ 1

4ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.

5ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.

6ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.

7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.

8ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,

ಯೋನ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी