ಯೆರೆಮಿಯ 13:9

ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 13

7ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.

8ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

9ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು.

10ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.

11ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.

ಯೆರೆಮಿಯ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी