೧ ಸಮುವೇಲನು 25:33

ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 25

31ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು.

32ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.

33ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.

34ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.

35ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.

೧ ಸಮುವೇಲನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी