ನ್ಯಾಯಸ್ಥಾಪಕರು 8:26

ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್‌ ತೂಕವಾಗಿತ್ತು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 8

24ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).

25ಅವರು--ನಾವು ಇಷ್ಟಪೂರ್ವಕವಾಗಿ ಕೊಡುವೆವು ಎಂದು ಹೇಳಿ ಒಂದು ವಸ್ತ್ರವನ್ನು ಹಾಸಿ ಅಲ್ಲಿ ಅವರವರು ಕೊಳ್ಳೆ ಹೊಡೆದ ವಾಲೆಗಳನ್ನು ಹಾಕಿದರು.

26ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್‌ ತೂಕವಾಗಿತ್ತು.

27ಆ ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು. ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.

28ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.

ನ್ಯಾಯಸ್ಥಾಪಕರು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी