ಯೋಹಾನನು 8:7

ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.

ಸಂದರ್ಭದೊಂದಿಗೆ ಓದಿ · ಯೋಹಾನನು 8

5ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.

6ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.

7ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.

8ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು.

9ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.

ಯೋಹಾನನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी