ಆದಿಕಾಂಡ 29:13

ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 29

11ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.

12ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.

13ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.

14ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.

15ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.

ಆದಿಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी