ಯೆಶಾಯ 30:14

ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ ಬಾವಿಯಿಂದ ನೀರನ್ನು ತೆಗೆಯುವದಕ್ಕಾಗಲಿ ಬೋಕಿ ಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 30

12ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--

13ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.

14ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ ಬಾವಿಯಿಂದ ನೀರನ್ನು ತೆಗೆಯುವದಕ್ಕಾಗಲಿ ಬೋಕಿ ಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.

15ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.

16ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.

ಯೆಶಾಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी