ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.
26ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
27ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
28ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.
29ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು.
30ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ