ಚೆಫನ್ಯ 2:3

ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.

ಸಂದರ್ಭದೊಂದಿಗೆ ಓದಿ · ಚೆಫನ್ಯ 2

1ಅಪೇಕ್ಷಿಸಲ್ಪಡದ ಓ ಜನಾಂಗವೇ ನೀವು ಒಟ್ಟಾಗಿ ಕೂಡಿಕೊಳ್ಳಿರಿ, ಹೌದು, ಒಟ್ಟಾಗಿ ಕೂಡಿಕೊಳ್ಳಿರಿ.

2ನಿರ್ಣಯವು ಬರುವದಕ್ಕಿಂತ ಮುಂಚೆ ಯೂ ದಿನವು ಹೊಟ್ಟಿನಂತೆ ಹಾದುಹೋಗುವದಕ್ಕಿಂತ ಮುಂಚೆಯೂ ಕರ್ತನ ಕೋಪದ ದಿನವು ಉರಿದು ನಿಮ್ಮ ಮೇಲೆ ಬರುವದಕ್ಕಿಂತ ಮುಂಚೆಯೂ ಕೂಡಿ ಕೊಳ್ಳಿರಿ.

3ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.

4ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್‌ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್‌ ಕೀಳಲ್ಪಡುವದು.

5ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.

ಚೆಫನ್ಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी