೨ ಅರಸುಗಳು 1:2

ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 1

1ಅಹಾಬನು ಸತ್ತ ತರುವಾಯ ಮೋವಾಬ್ಯರು ಇಸ್ರಾಯೇಲ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು.

2ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.

3ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?

4ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.

೨ ಅರಸುಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी