ಯಾಜಕಕಾಂಡ 8:27

ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 8

25ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.

26ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು.

27ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು.

28ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು.

29ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು.

ಯಾಜಕಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी