ನಿನ್ನ ದನಗಳಿಗೂ ದೇಶದಲ್ಲಿರುವ ಮೃಗಗಳಿಗೂ ಅದರ ಹುಟ್ಟುವಳಿಯೆಲ್ಲಾ ಆಹಾರಕ್ಕಾಗಿ ಇರಬೇಕು.
5ತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು.
6ದೇಶದ ಆ ಸಬ್ಬತ್ತು ನಿಮ್ಮ ಆಹಾರಕ್ಕಾಗಿ ಇರುವದು; ನಿನಗೂ ನಿನ್ನ ದಾಸನಿಗೂ ದಾಸಿಗೂ ಕೂಲಿ ಆಳಿಗೂ ನಿನ್ನೊಂದಿಗೆ ಪ್ರವಾಸಿ ಯಾಗಿರುವ ಪರಕೀಯನಿಗೂ
7ನಿನ್ನ ದನಗಳಿಗೂ ದೇಶದಲ್ಲಿರುವ ಮೃಗಗಳಿಗೂ ಅದರ ಹುಟ್ಟುವಳಿಯೆಲ್ಲಾ ಆಹಾರಕ್ಕಾಗಿ ಇರಬೇಕು.
8ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.
9ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ