ಪ್ರಸಂಗಿ 4:2

ಆದಕಾರಣ ಇನ್ನೂ ಜೀವ ದಿಂದಿದ್ದು ಬದುಕುವವರಿಗಿಂತ ಆಗಲೇ ಮೃತಪಟ್ಟ ಸತ್ತವರನ್ನು ನಾನು ಹೆಚ್ಚಾಗಿ ಹೊಗಳಿದೆನು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 4

1ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.

2ಆದಕಾರಣ ಇನ್ನೂ ಜೀವ ದಿಂದಿದ್ದು ಬದುಕುವವರಿಗಿಂತ ಆಗಲೇ ಮೃತಪಟ್ಟ ಸತ್ತವರನ್ನು ನಾನು ಹೆಚ್ಚಾಗಿ ಹೊಗಳಿದೆನು.

3ಹೌದು, ಇನ್ನೂ ಹುಟ್ಟದೆ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು.

4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.

ಪ್ರಸಂಗಿ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी