ಯಾಜಕಕಾಂಡ 16:10

ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 16

8ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ.

9ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.

10ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.

11ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.

12ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.

ಯಾಜಕಕಾಂಡ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी