ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
20ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು.
21ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು.
22ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
23ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.
24ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ