೧ ಪೂರ್ವಕಾಲವೃತ್ತಾಂತ 11:17

ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 11

15ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್‌ ತಗ್ಗಿನಲ್ಲಿ ಇಳಿದಿತ್ತು.

16ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.

17ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.

18ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು.

19ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.

೧ ಪೂರ್ವಕಾಲವೃತ್ತಾಂತ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी