ಯೆಶಾಯ 37:31

ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.

ಸಂದರ್ಭದೊಂದಿಗೆ ಓದಿ · ಯೆಶಾಯ 37

29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.

30ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.

31ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.

32ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್‌ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.

33ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.

ಯೆಶಾಯ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी