ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
1ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ.
2ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.
3ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
4ಅದು ಇಸ್ರಾಯೇಲಿಗೆ ಕಟ್ಟಳೆಯೇ; ಯಾಕೋಬನ ದೇವರ ನ್ಯಾಯಪ್ರಮಾಣವೇ;
5ನಾನು ತಿಳಿಯದ ಭಾಷೆಯನ್ನು ಕೇಳಿದ ಐಗುಪ್ತದೇಶದಲ್ಲೆಲ್ಲಾ ಆತನು ಹೊರಟಾಗ ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ