ಯೆಹೆಜ್ಕೇಲನು 15:6

ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 15

4ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ?

5ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು?

6ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ.

7ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.

8ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी