ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
9ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ