೧ ಅರಸುಗಳು 1:12

ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 1

10ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ.

11ಆಗ ನಾತಾನನು ಸೊಲೊಮೋನನ ತಾಯಿ ಯಾದ ಬತ್ಷೆಬಳಿಗೆ--ನಮ್ಮ ಒಡೆಯನಾದ ದಾವೀದನು ಅರಿಯದಿರುವಾಗ ಹಗ್ಗೀತಳ ಮಗನಾದ ಅದೋನೀ ಯನು ಆಳುತ್ತಾನೆಂದು ನೀನು ಕೇಳಲಿಲ್ಲವೋ?

12ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ.

13ನೀನು ದಾವೀದನ ಬಳಿಗೆ ಹೋಗಿ ಅವ ನಿಗೆ--ಅರಸನಾದ, ನನ್ನ ಒಡೆಯನೇ, ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವದು ಯಾಕೆ ಎಂದು ಹೇಳು.

14ಇಗೋ, ನೀನು ಇನ್ನೂ ಅರಸನ ಸಂಗಡ ಮಾತ ನಾಡುತ್ತಿರುವಾಗ ನಾನು ನಿನ್ನ ಹಿಂದೆಯೇ ಒಳಗೆ ಬಂದು ನಿನ್ನ ಮಾತು ಗಳನ್ನು ಸ್ಥಿರಮಾಡುವೆನು ಅಂದನು.

೧ ಅರಸುಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी