ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
9ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
10ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
11ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
12ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
13ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ