೧ ಥೆಸಲೊನೀಕದವರಿಗೆ 2:17

ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.

ಸಂದರ್ಭದೊಂದಿಗೆ ಓದಿ · ೧ ಥೆಸಲೊನೀಕದವರಿಗೆ 2

15ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.

16ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.

17ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.

18ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.

19ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?

೧ ಥೆಸಲೊನೀಕದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी