ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.
21ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.
22ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.
23ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.
24ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.
25ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ