ಜೆಕರ್ಯ 13:7

ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಜೆಕರ್ಯ 13

5ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.

6ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು.

7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

8ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.

9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.

ಜೆಕರ್ಯ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी