ಯೆಹೆಜ್ಕೇಲನು 16:15

ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

13ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.

14ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ.

15ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.

16ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ.

17ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ.

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी