ಅರಣ್ಯಕಾಂಡ 4:29

ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 4

27ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.

28ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.

29ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.

30ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.

31ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ.

ಅರಣ್ಯಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी