ಯೆರೆಮಿಯ 14:16

ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 14

14ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.

15ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.

16ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.

17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.

18ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.

ಯೆರೆಮಿಯ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी