೧ ಅರಸುಗಳು 19:6

ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 19

4ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್‌ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.

5ಅವನು ಷಿಟ್ಟೀಮ್‌ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು.

6ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.

7ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು.

8ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.

೧ ಅರಸುಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी