ಯೆಹೆಜ್ಕೇಲನು 47:8

ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 47

6ಅವನು ನನಗೆ ಹೇಳಿದ್ದೇನಂದರೆ, ಮನುಷ್ಯಪುತ್ರನೇ; ನೀನು ಇದನ್ನು ನೋಡಿದೆಯಾ ಎಂದು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು.

7ನಾನು ತಿರಿಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆಕಡೆಯೂ ಈಕಡೆಯೂ ಅತಿ ಹೆಚ್ಚು ಮರಗಳಿದ್ದವು.

8ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು.

9ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು.

10ಏನ್‌ಗೆದಿ ಮೊದಲುಗೊಂಡು ಏನ್‌ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,

ಯೆಹೆಜ್ಕೇಲನು 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी