ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
9ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
10ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು.
11ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
12ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
13ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ