ಯೆಶಾಯ 10:24

ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 10

22ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.

23ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.

24ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.

25ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.

26ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.

ಯೆಶಾಯ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी