ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
23ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
24ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
25ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.
26ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ