ಆದಿಕಾಂಡ 6:3

ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 6

1ತರುವಾಯ ಭೂಮಿಯ ಮೇಲೆ ಜನರು ಹೆಚ್ಚುವದಕ್ಕೆ ಆರಂಭಿಸಿದಾಗ ಅವರಿಗೆ ಕುಮಾರ್ತೆಯರು ಹುಟ್ಟಿದರು.

2ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.

3ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.

4ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.

5ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.

ಆದಿಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी