ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
10ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.
11ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು.
12ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
13ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಭೆಯ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.
14ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವವರ ಮೇಲೆ ಕೋಪಗೊಂಡು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ