ಯೆಹೆಜ್ಕೇಲನು 3:19

ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 3

17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.

18ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.

19ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.

20ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;

21ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.

ಯೆಹೆಜ್ಕೇಲನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी