ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
5(ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--
6ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.
7ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
8ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,
9ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ