ಧರ್ಮೋಪದೇಶಕಾಂಡ 17:6

ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 17

4ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ

5ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.

6ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.

7ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

8ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ

ಧರ್ಮೋಪದೇಶಕಾಂಡ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी