ನೆಹೆಮಿಯ 13:23

ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 13

21ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಆ ಹೊತ್ತಿನಿಂದ ಅವರು ಸಬ್ಬತ್‌ ದಿವಸದಲ್ಲಿ ಬರಲೇ ಇಲ್ಲ;

22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್‌ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.

23ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.

24ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು.

25ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;

ನೆಹೆಮಿಯ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी