ಯೆಹೆಜ್ಕೇಲನು 48:8

ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ಆ ಬೇರೆ ಪಾಲುಗಳಲ್ಲಿ ಒಂದರ ಹಾಗೆ ಉದ್ದವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯ ವರೆಗೂ ಇರಬೇಕು. ಅದರ ಮಧ್ಯದಲ್ಲಿ ಪರಿಶುದ್ಧ ಸ್ಥಳವೂ ಇರಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 48

6ಎಫ್ರಾ ಯಾಮ್‌ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೆ ರೂಬೇನ್‌ಗೆ ಒಂದು ಭಾಗ.

7ರೂಬೇನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಯೆಹೂದಕ್ಕೆ ಒಂದು ಭಾಗ.

8ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ಆ ಬೇರೆ ಪಾಲುಗಳಲ್ಲಿ ಒಂದರ ಹಾಗೆ ಉದ್ದವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯ ವರೆಗೂ ಇರಬೇಕು. ಅದರ ಮಧ್ಯದಲ್ಲಿ ಪರಿಶುದ್ಧ ಸ್ಥಳವೂ ಇರಬೇಕು.

9ನೀವು ಕರ್ತನಿಗೆ ಅರ್ಪಿಸುವಂತ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು;

10ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು.

ಯೆಹೆಜ್ಕೇಲನು 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी