ಆದಿಕಾಂಡ 4:6

ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?

ಸಂದರ್ಭದೊಂದಿಗೆ ಓದಿ · ಆದಿಕಾಂಡ 4

4ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.

5ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.

6ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?

7ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.

8ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.

ಆದಿಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी