ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.
24ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.
25ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು?
26ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.
27ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ;
28ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ