೧ ಕೊರಿಂಥದವರಿಗೆ 2:8

ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 2

6ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.

7ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.

8ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.

9ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.

10ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.

೧ ಕೊರಿಂಥದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी