ರೂತಳು 1:15

ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು.

ಸಂದರ್ಭದೊಂದಿಗೆ ಓದಿ · ರೂತಳು 1

13ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು.

14ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು.

15ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು.

16ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.

17ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.

ರೂತಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी