ಹಗ್ಗಾಯ 2:8

ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಹಗ್ಗಾಯ 2

6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.

7ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

8ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

9ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

10ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,

ಹಗ್ಗಾಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी