ಧರ್ಮೋಪದೇಶಕಾಂಡ 2:6

ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 2

4ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.

5ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್‌ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.

6ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.

7ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.

8ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್‌, ಎಚ್ಯೋನ್ಗೆಬೆರ್‌ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.

ಧರ್ಮೋಪದೇಶಕಾಂಡ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी