ಗಲಾತ್ಯದವರಿಗೆ 2:9

ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.

ಸಂದರ್ಭದೊಂದಿಗೆ ಓದಿ · ಗಲಾತ್ಯದವರಿಗೆ 2

7ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.

8ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.

9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.

10ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.

11ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.

ಗಲಾತ್ಯದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी