ಯಾಜಕಕಾಂಡ 11:45

ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 11

43ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು.

44ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.

45ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.

46ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.

47ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.

ಯಾಜಕಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी