ನ್ಯಾಯಸ್ಥಾಪಕರು 9:53

ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 9

51ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು; ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.

52ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು ಅದರ ವಿರುದ್ಧ ಯುದ್ಧಮಾಡಿ ಗೋಪುರದ ಬಾಗಲನ್ನು ಸುಟ್ಟು ಬಿಡುವದಕ್ಕೆ ಅದರ ಬಳಿಗೆ ಬಂದನು.

53ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು.

54ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.

55ಅಬೀಮೆಲೆಕನು ಸತ್ತುಹೋದದ್ದನ್ನು ಇಸ್ರಾಯೇಲ್‌ ಮನುಷ್ಯರು ನೋಡಿದಾಗ ಅವರವರು ತಮ್ಮ ಸ್ಥಳಗಳಿಗೆ ಹೋದರು.

ನ್ಯಾಯಸ್ಥಾಪಕರು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी