೨ ಸಮುವೇಲನು 9:3

ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 9

1ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.

2ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು.

3ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.

4ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು.

5ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು.

೨ ಸಮುವೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी